ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ಗೆ ʻZ’ ಕೆಟಗರಿ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ. ಗುಪ್ತಚರ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ, ಮುಖ್ಯ ಚುನಾವಣಾ ಆಯುಕ್ತರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಿದೆ.

ರಾಜೀವ್ ಕುಮಾರ್ ಅವರ ರಕ್ಷಣೆಗೆ, ಭದ್ರತಾ ಪ್ರೋಟೋಕಾಲ್‌ಗಳ ಅಡಿಯಲ್ಲಿ ಸಮಗ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಆರ್‌ಪಿಎಫ್‌ ಕಮಾಂಡೋಗಳು ಸೇರಿದಂತೆ ಒಟ್ಟು 33 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರ ನಿವಾಸದಲ್ಲಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‍ಗಳನ್ನು ಇದು ಒಳಗೊಂಡಿರುತ್ತದೆ.

6 ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‍ಒಗಳು) ಇಡೀ ದಿನದ ರಕ್ಷಣೆಯನ್ನು ಒದಗಿಸುತ್ತಾರೆ. 12 ಸಶಸ್ತ್ರ ಬೆಂಗಾವಲು ಕಮಾಂಡೋಗಳು ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಾರೆ. ಹೆಚ್ಚುವರಿಯಾಗಿ, ಪ್ರತಿ ಶಿಫ್ಟ್‌ಗೆ ಇಬ್ಬರು ವೀಕ್ಷಕರು ಮತ್ತು ಮೂವರು ತರಬೇತಿ ಪಡೆದ ಚಾಲಕರು ಎಲ್ಲಾ ಸಮಯದಲ್ಲೂ ರಾಜೀವ್ ಕುಮಾರ್ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!