ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್ ಬೋಸ್‌ಗೆ ಝಡ್ ಪ್ಲಸ್ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.  ಗುಪ್ತಚರ ಸಂಸ್ಥೆಯ ವರದಿ ಆಧರಿಸಿ ರಾಜ್ಯಪಾಲರಿಗೆ ಅಪಾಯದ ಹಿನ್ನೆಲೆಯಲ್ಲಿ ಸರ್ಕಾರ ಝಡ್ ಪ್ಲಸ್ ಕೆಟಗರಿ ಭದ್ರತೆ ಒದಗಿಸಿದೆ.

ಬೋಸ್ ಕೇರಳ ಕೇಡರ್‌ನ 1977 ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿ. ಕಳೆದ ವರ್ಷ ನವೆಂಬರ್ 17 ರಂದು ಅವರನ್ನು ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಿಸಲಾಯಿತು. ನವೆಂಬರ್ 23 ರಂದು ಅವರು ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ರಾಜ್ಯಪಾಲರಾಗುವ ಮೊದಲು, ಅವರನ್ನು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ನಂತರ ನಡೆದ ಹಿಂಸಾಚಾರದ ವಿಚಾರಣಾ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಯಿತು.

ಇದೀಗ ಇವರ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಐಬಿ ಮೂಲಗಳು ವರದಿ ಮಾಡಿದ್ದರಿಂದ ಕೇಂದ್ರ ಗೃಹ ಸಚಿವಾಲಯ ಬಿಗಿ ಭದ್ರತೆ ಕೈಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!