Sunday, October 2, 2022

Latest Posts

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಝಡ್ ಪ್ಲಸ್ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕೇಂದ್ರ ಅರೆಸೇನಾ ಪಡೆಯ ಝಡ್ ಪ್ಲಸ್ ವರ್ಗದ ವಿಐಪಿ ಭದ್ರತೆಯನ್ನು ಕೇಂದ್ರ ಸರಕಾರ ನೀಡಿದೆ .
ರಾಮ್ ನಾಥ್ ಕೋವಿಂದ್ ಅವರಿಗೆ ಅಖಿಲ ಭಾರತ ಆಧಾರದ ಮೇಲೆ ಸಶಸ್ತ್ರ ಬೆಂಗಾವಲು ನೀಡಲಾಗುವುದು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ವಿಐಪಿ ಭದ್ರತಾ ಕಮಾಂಡೋ ಘಟಕವು ಕಾರ್ಯವನ್ನು ನಿರ್ವಹಿಸುತ್ತದೆ.
ಕೇಂದ್ರ ಗುಪ್ತಚರ ಸಂಸ್ಥೆಗಳು ಮಾಡಿದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಭದ್ರತೆಯನ್ನು ಮಂಜೂರು ಮಾಡಿದೆ ಮತ್ತು ಸೆ. 5 ರಂದು ಪಡೆ ಈ ಕಾರ್ಯವನ್ನು ವಹಿಸಿಕೊಂಡಿದೆ. ಕೇಂದ್ರ ದೆಹಲಿಯ ಜನಪಥ್ ರಸ್ತೆಯಲ್ಲಿರುವ ಮಾಜಿ ರಾಷ್ಟ್ರಪತಿಯವರ ಮನೆಗೂ ಪಡೆ ಭದ್ರತೆ ನೀಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!