ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗೆ Z+ ಭದ್ರತೆ: ಕೇಂದ್ರ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕೇಂದ್ರ ಸರಕಾರವು ʻಝಡ್ ಪ್ಲಸ್‌ʼ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಲಾಗಿದೆ .
ಇತ್ತೀಚಿನ ಭದ್ರತಾ ಪರಿಶೀಲನೆಯ ನಂತರ, ಸಿಆರ್‌ಪಿಎಫ್‌ಗೆ ಅವರ ಭದ್ರತೆಯನ್ನು ಅಖಿಲ ಭಾರತ ಆಧಾರದ ಮೇಲೆ Z ಪ್ಲಸ್‌ನ ಉನ್ನತ ವರ್ಗಕ್ಕೆ ಅಪ್‌ಗ್ರೇಡ್ ಮಾಡಲು ಗೃಹ ವ್ಯವಹಾರಗಳ ಸಚಿವಾಲಯ (MHA) ನಿರ್ದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
53 ವರ್ಷದ ಹಿಮಂತ ಬಿಸ್ವಾ ಶರ್ಮಾ ಅವರು ಈಶಾನ್ಯ ರಾಜ್ಯಗಳಲ್ಲಿ ಅವರ ಪ್ರಯಾಣಕ್ಕಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ವಿಐಪಿ ಭದ್ರತಾ ಘಟಕದಿಂದ ಇಲ್ಲಿಯವರೆಗೆ ʻZʼ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿತ್ತು. ಆದ್ರೆ, ಇದೀಗ ʻಝಡ್ ಪ್ಲಸ್‌ʼಉನ್ನತ ವರ್ಗಕ್ಕೆ ಮೇಲ್ದರ್ಜೆಗೇರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!