ಜಮೀರ್ ಅಹ್ಮದ್ ಖಾನ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

ಹೊಸದಿಗಂತ ವರದಿ,ಬಳ್ಳಾರಿ:

ವಸತಿ,ವಕ್ಫ್ ಖಾತೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಗಣಿನಾಡು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ನಾಗೇಂದ್ರ ಅವರಿಂದ ತೆರವಾದ ಜಿಲ್ಲಾ ಉಸ್ತುವಾರಿಯನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸರ್ಕಾರ ನೀಡಿದೆ.

ಈ ಕುರಿತು ಸರ್ಕಾರದ ಉಪ ಕಾರ್ಯದರ್ಶಿ (ಲೆಕ್ಕಪತ್ರ ವಿಭಾಗ) ಪುಟ್ಟರಾಮು ಆರ್.ಅವರು ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಜೇ.ಎನ್.ಗಣೇಶ್, ಸಿರುಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್, ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ತೆರೆಮರೆಯಲ್ಲಿ ತಮ್ಮ ತಮ್ಮ ನಾಯಕರ ಮೂಲಕ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ 5ನೇ ಬಾರಿ ಶಾಸಕರಾಗಿ ಆಯ್ಕೆಯಾಗಿ ಗಮನಸೆಳೆದಿದ್ದ ತುಕಾರಾಂ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ತುಕಾರಾಂ ಅವರು, ಸoಸದರಾಗದಿದ್ದರೆ ಸಚಿವ ಸ್ಥಾನ ಇವರಿಗೆ ಒಲಿದು ಬರುತ್ತಿತ್ತು ಎಂದು ಪಕ್ಷದ ಮುಖಂಡರಲ್ಲಿ ಚರ್ಚೆ ನಡೆದಿತ್ತು. ಇದೆಲ್ಲದಕ್ಕೂ ಸದ್ಯ ತೆರೆ ಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!