ಕದನ ವಿರಾಮ ಘೋಷಿಸಿದ್ದರೂ ದಾಳಿ: ರಷ್ಯಾ ನಡೆಯನ್ನು ಟೀಕಿಸಿದ ಝೆಲೆನ್‌ಸ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದರೂ ದಾಳಿ ಮುಂದುವರಿಸಿರುವ ರಷ್ಯಾ ನಡೆಯನ್ನು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಟೀಕಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಝೆಲೆನ್‌ಸ್ಕಿ, ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಮೇಲೂ ರಾತ್ರಿ ವೇಳೆ ಕೆಲ ಸ್ಥಳಗಳ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸಿವೆ. ಈಸ್ಟರ್‌ಗೆ ಗೌರವಿಸುವ ಉದ್ದೇಶದಿಂದ ರಷ್ಯಾ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದ್ದಾರೆ.

ಕದನ ವಿರಾಮ ಕುರಿತ ಮಾತುಕತೆಗೆ ನಾವು ತಯಾರಿದ್ದೇವೆ. ವಾಸ್ತವಿಕ ಸಂಗತಿಗಳ ಆಧಾರದ ಮೇಲೆ ನಾವು ನಮ್ಮ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಅವರು ಪುನರುಚ್ಚರಿಸಿದ್ದು, ಭಾನುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 30 ದಿನದ ವರೆಗೆ ಕದನ ವಿರಾಮ ವಿಸ್ತರಿಸಲು ಉಕ್ರೇನ್‌ ಸಿದ್ಧವಿದೆ. ರಷ್ಯಾ ಕೂಡ ಕದನ ವಿರಾಮಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಬದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!