Tuesday, September 27, 2022

Latest Posts

ಕೇರಳದಲ್ಲಿ ಹೆಚ್ಚುತ್ತಿದೆ ‘ಝಿಕಾ’ ಸೋಂಕಿತರ ಸಂಖ್ಯೆ: ಮತ್ತೆ ಮೂರು ಪ್ರಕರಣ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಡೆಸ್ಕ್:

ಕೇರಳದಲ್ಲಿ ದಿನದಿಂದ ದಿನಕ್ಕೆ ಝಿಕಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮತ್ತೆ ಹೊಸದಾಗಿ ಮೂರು ಪ್ರಕರಣ ಪತ್ತೆಯಾಗುವ ಮೂಲಕ ಝಿಕಾ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅನಾಯಾರಾ ಪ್ರದೇಶದ ಇಬ್ಬರು ನಿವಾಸಿಗಳು ಮತ್ತು ಪೆಟ್ಟಾ ವ್ಯಾಪ್ತಿಯ ಒಬ್ಬರಲ್ಲಿ ಹೊಸದಾಗಿ ಝಿಕಾ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಝಿಕಾ ವೈರಸ್ ಮಟ್ಟ ಹಾಕಲು ಆರೋಗ್ಯ ಸಚಿವೆ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆದಿದ್ದು, ವೈದ್ಯಕೀಯ ಮೂಲಸೌಕರ್ಯಗಳ ಹೆಚ್ಚಳ ಮತ್ತು ಸೊಳ್ಳೆಗಳ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!