ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿಆರು ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ರ‍್ಯಾಂಡಮ್ ಟೆಸ್ಟ್ ವೇಳೆ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದ್ದು, ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.