Monday, August 15, 2022

Latest Posts

ಝಿಕಾ ವೈರಸ್: ಕೇರಳದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಝಿಕಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಇಂದು ಒಂದು ಝಿಕಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಝಿಕಾ  ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಇದುವರೆಗೆ ಕೇರಳದಲ್ಲಿ 15 ಮಂದಿಗೆ ಝಿಕಾ ವೈರಸ್ ಸೋಂಕು ದೃಢ ಪಟ್ಟಿದೆ. ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಕಾಳಜಿ ವಹಿಸಬೇಕು ಎಂದು  ಸಾರ್ವಜನಿಕ ಆರೋಗ್ಯ ತಜ್ಞ ಡಾ. ಮ್ಯಾಥ್ಯೂ ವರ್ಗೀಸ್ ಹೇಳಿದ್ದಾರೆ.

ಕೇರಳದ ಎಲ್ಲಾ ಜಿಲ್ಲೆಗಳಲ್ಲಿಯೂ ಝಿಕಾ ವೈರಸ್ ಹಿನ್ನೆಲೆ ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ಮಾಡಲಾಗಿದೆ. ಝಿಕಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಮುಂಜಾಗ್ರತ ಕ್ರಮವಾಗಿ ಕರ್ನಾಟಕ ಸರ್ಕಾರ ಶುಕ್ರವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss