Thursday, August 11, 2022

Latest Posts

ಝಿಕಾ ವೈರಸ್: ಕೇರಳದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಝಿಕಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಭಾನುವಾರ ಮತ್ತೆ ಮೂರು ಝಿಕಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಆಲಪ್ಪಳದಲ್ಲಿ ರಾಷ್ಟ್ರೀಯ ವೈರಾಣು ಸಂಸ್ಥೆಯ ಘಟಕವನ್ನೂ ಆರಂಭಿಸಲಾಗಿದೆ. ಹಾಗೆಯೇ ತ್ರಿಶ್ಶೂರ್‌, ತಿರುವನಂತಪುರ ಮತ್ತು ಕಲ್ಲಿಕೋಟೆಯಲ್ಲಿರುವಂಹ ಸರಕಾರಿ ವೈದ್ಯ ಕಾಲೇಜುಗಳಲ್ಲಿ ಝಿಕಾ ಸೋಂಕು ದೃಢಪಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.

ಝಿಕಾ ಸೋಂಕಿನ ಪತ್ತೆಗಾಗಿ 2,100 ಕಿಟ್‌ಗಳನ್ನು ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ಕೇರಳಕ್ಕೆ ನೀಡಲಾಗಿದೆ. ಕೇರಳದ ಎಲ್ಲಾ ಜಿಲ್ಲೆಗಳಲ್ಲಿಯೂ  ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ಮಾಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss