Monday, August 15, 2022

Latest Posts

ಝೀಕಾ ವೈರಸ್ ಭೀತಿ: ಒಂದು ವಾರಗಳ ಕಾಲ ಕರ್ನಾಟಕ-ಕೇರಳ ಸರ್ಕಾರಿ ಬಸ್ ಸಂಚಾರ ಮಾಡಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ರಾಜ್ಯದಲ್ಲಿ ಕೊರೋನಾ ಜೊತೆಗೆ ಇದೀಗ ಝೀಕಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ.ಈ ಹಿನ್ನಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಸರ್ಕಾರಿ ಬಸ್ ಸಂಚಾರವನ್ನು ಆರಂಭಿಸುವುದು ಬೇಡ ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಜುಲೈ 12ರಿಂದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಂದ ಕೇರಳ ರಾಜ್ಯದ ವಿವಿಧ ಪ್ರದೇಶಗಳಿಗೆ ಬಸ್ ಸಂಚಾರ ಆರಂಭ ಮಾಡುವುದಾಗಿ ಹೇಳಿತ್ತು. ಆದರೆ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಮಂಗಳೂರು-ಕೇರಳ ನಡುವೆ ಒಂದು ವಾರ ಬಸ್ ಓಡಿಸುವುದು ಬೇಡ ಎಂದು ತೀರ್ಮಾನಿಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss