ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕೊರೋನಾದಿಂದ ತತ್ತರಿಸಿದ ಕೇರಳಕ್ಕೆ ಇದೀಗ ಮತ್ತೊಂದು ಆತಂಕ ಎದುರಾಗಿದ್ದು, ರಾಜ್ಯದಲ್ಲಿ 13 ಝಿಕಾ ವೈರಸ್ ಪ್ರಕರಣಗಳು ವರದಿಯಾಗಿವೆ.
ಕೇರಳದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ ಕೇಂದ್ರ ಆರೋಗ್ಯ ಸಚಿವಾಲಯ, ಆರು ಸದಸ್ಯರ ತಂಡವನ್ನು ಕೇರಳಕ್ಕೆ ಕಳುಹಿಸಿದೆ ಎಂದು ಜಂಟಿ ಆರೋಗ್ಯ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಈವರೆಗೂ 13 ಝಿಕಾ ವೈರಸ್ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 24 ವರ್ಷದ ಗರ್ಭಿಣಿಗೆ ಮೊದಲು ಸೋಂಕು ಕಾಣಿಸಿದೆ.
‘ಕೇರಳದಿಂದ ಕೆಲವು ಜಿಕಾ ಪ್ರಕರಣಗಳು ವರದಿಯಾಗಿವೆ. ಪರಿಸ್ಥಿತಿ ಮೇಲ್ವಿಚಾರಣೆಗೆ, ಮತ್ತು ರಾಜ್ಯ ಸರ್ಕಾರವನ್ನು ಬೆಂಬಲಿಸಲು, ಸಾರ್ವಜನಿಕ ಆರೋಗ್ಯ ತಜ್ಞರು, ರೋಗವಾಹಕ-ಹರಡುವ ರೋಗ ತಜ್ಞರು ಮತ್ತು ಏಮ್ಸ್ ನ ವೈದ್ಯರನ್ನು ಒಳಗೊಂಡ ಆರು ಸದಸ್ಯರ ತಂಡಕ್ಕೆ ಈಗಾಗಲೇ ಅಲ್ಲಿಗೆ ತಲುಪಿದೆ’ ಎಂದು ಲವ್ ಅಗರ್ವಾಲ್ ತಿಳಿಸಿದ್ದಾರೆ.