ಹೊಸದಿಗಂತ ಮಂಗಳೂರು:
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ದ.ಕ. ಜಿಲ್ಲಾ ಮಟ್ಟದ ಪ್ರಶಸ್ತಿಗೆ ಹೊಸದಿಗಂತ ಪತ್ರಿಕೆಯ ಪುತ್ತೂರು ವರದಿಗಾರ ಐ.ಬಿ.ಸಂದೀಪ್ ಕುಮಾರ್ ಅವರು ಆಯ್ಕೆಯಾಗಿದ್ದು, ಇಂದು ಜಿಲ್ಲಾಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕರು ಸೇರಿದಂತೆ ಹಲವು ಮಂದಿ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.