ಹೊಸದಿಗಂತ ಡಿಜಿಟಲ್ ಡೆಸ್ಕ್:
2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮುತ್ತತ್ತಿ ಗ್ರಾಮದ ಎಸ್.ಬಿ.ಎಂ. ಲೇಔಟ್‌ನ ನಿವಾಸಿ ಶರತ್(40) ಮೃತ ದುರ್ದೈವಿ.
ಶರತ್ ಭಾನುವಾರ ರಾತ್ರಿ 11 ಗಂಟೆಯಲ್ಲಿ ಫುಡ್ ಡೆಲಿವರಿ ಮಾಡಲು ಹಾಸನ ನಗರದಿಂದ ಗೆಂಡೆಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶರತ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.