ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕವಾಗಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಿಗೇ ಎಚ್ಚೆತ್ತುಕೊಂಡಿರುವ ಆನ್‌ಲೈನ್ ಆಹಾರ ಪೂರೈಕಾ ಸಂಸ್ಥೆ ಜೊಮಾಟೋ ಹಸಿರು ಸಮವಸ್ತ್ರ ಧರಿಸಿ, ಹಸಿರು ಬಾಕ್ಸ್‌ಗಳಲ್ಲಿ ಡೆಲಿವರಿ ಮಾಡಬೇಕು ಎಂದು ಹೊರಡಿಸಿದ್ದ ತನ್ನ ನಿರ್ಧಾರವನ್ನು ಹಿಂಪಡೆದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಜೊಮಾಟೊ ಸಂಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯಲ್, ಆಹಾರ ವಿತರಣೆಯಲ್ಲಿ ಪ್ರತ್ಯೇಕತೆ ಮಾಡಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ರೀತಿಯ ಆಹಾರ ವಿತರಕರು ಕೆಂಪು ಬಣ್ಣದ ಸಮವಸ್ತ್ರವನ್ನೇ ಧರಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದೆ.