ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಸಿಕ್ಕಿದೆ. ಇಂದು ಮಿಜೋರಾಂ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಝೆಡ್‌ಪಿಎಂ ಮುನ್ನಡೆ ಕಾಯ್ದುಕೊಂಡಿದೆ.
ಬೆಳಗ್ಗೆ ಎಂಟು ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಬೆಳಗ್ಗೆ 10:30 ವೇಳೆಗೆ ಝೆಡ್‌ಪಿಎಂ 29 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಮ್‌ಎನ್‌ಎಫ್ ಏಳು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.