Monday, October 13, 2025

ಕಾಲ್ತುಳಿತ ದುರಂತ: ಸದನ ಸಮಿತಿ ರಚಿಸಿ, ಸಿಬಿಐ ತನಿಖೆಗೆ ವಹಿಸುವಂತೆ ಆರ್.ಅಶೋಕ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲ್ತುಳಿತ ದುರಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಎ1, ಎ2, ಎ3 ಆರೋಪಿಗಳಾಗಿದ್ದಾರೆ. ಆದ್ದರಿಂದ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಸುದೀರ್ಘವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂವೇದನೆ ಇದ್ದರೆ, ರಾಜ್ಯದ ಜನರ ಕ್ಷಮೆ ಕೇಳಬೇಕು. ಇದರ ಸಂಪೂರ್ಣ ಹೊಣೆಯನ್ನು ಮೂವರೂ ವಹಿಸಿಕೊಳ್ಳಬೇಕು. ಜೊತೆಗೆ ರಾಜೀನಾಮೆ ನೀಡಬೇಕು ಹಾಗೂ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!