Monday, October 13, 2025

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಐವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷ್ಣ ಜನ್ಮಾಷ್ಟಮಿ ಆಚರಣೆ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ.

ರಾಮಂತಪುರದ ಗೋಕುಲನಗರದಲ್ಲಿ ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!