ಹೊಸದಿಗಂತ ಡಿಜಿಟಲ್ ಡೆಸ್ಕ್:
ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಆಗಸ್ಟ್ 25ರ ಬದಲಾಗಿ ಆ.27ರಂದು ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ.
ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಇದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆಯೂ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಎಸ್ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ಸಿಎಂ ಸಿದ್ದರಾಮಯ್ಯ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್ಸಿಗೆ ಸೂಚಿಸಿದ್ದರು.