ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ರಷ್ಯಾ ನಡುವಿನ ಯುದ್ದ ಸಂಘರ್ಷದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 130 ಡಾಲರ್ ಗಡಿ ತಲುಪಿದ್ದು, ಇದರಿಂದ ಭಾರತದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಭಾರಿ ಹೆಚ್ಚಳವಾಗುತ್ತೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಜನರ ಹಿತಾಸಕ್ತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆಯ ನಿರ್ಧಾರ ಮಾಡಲಿದೆ ಎಂದರು.
ದೇಶದಲ್ಲಿ ತೈಲ ಬೆಲೆಜಾಗತಿಕ ಬೆಲೆಗಳ ಮೇಲೆ ಆಧರಿಸಿದೆ ಯುದ್ಧ ನಡೆಯುತ್ತಿದೆ. ಆದರೂ ತೈಲ ಕಂಪನಿಗಳುನಮ್ಮ ಜನರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ತೈಲ ಬೆಲೆಯಲ್ಲಿ ಕಡಿಮೆಗೊಳಿಸಿ, ಇದೀಗ ಏರಿಕೆ ಮಾಡಲಾಗುವುದು ಎಂಬ ಹೇಳಿಕೆಗೆ ಉತ್ತರಿಸಿದ ಸಿಂಗ್, ಯುಪಿ, ಪಂಜಾಬ್, ಗೋವಾ, ಉತ್ತರಾಖಂಡ್ ಹಾಗೂ ಮಣಿಪುರ ವಿಧಾನಸಭೆ ಚುನಾವಣೆಗಳಿಗಾಗಿ ತೈಲ ಬೆಲೆ ಏರಿಕೆಯನ್ನು ತಡೆದಿಲ್ಲ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪ್ರಸ್ತುತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲ್ಗೆ 126 ಡಾಲರ್ ಇದೆ ಎಂದರು.