ಮೇಷ ರಾಶಿ:
ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಸಣ್ಣ ಕಾರಣಕ್ಕೆ ನೆರೆಯವರ ಜೊತೆ ಕಲಹವಾಗಬಹುದು. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ.
ವೃಷಭ ರಾಶಿ:
ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಮನಸ್ಸಿನಲ್ಲಿ ಯಾವುದೋ ಆತಂಕವು ಇರಲಿದ್ದು ಹೊರಹಾಕಲು ಪ್ರಯತ್ನಿಸುವಿರಿ. ಬಂಗಾರದ ಖರೀದಿಗೆ ಉತ್ಸಾಹವನ್ನು ತೋರುವಿರಿ. ರಕ್ಷಣಾತ್ಮಕ ಉದ್ಯೋಗದಲ್ಲಿ ಸಾಧನೆ. ಮನೆಗೆ ಆಗಮಿಸಿದ ನಿಮಗೆ ಕುಟುಂಬದ ಪ್ರೀತಿಯು ಸಿಗಲಿದೆ.
ಮಿಥುನ ರಾಶಿ:
ಹೊಸ ಕಲಿಕೆಯ ಬಗ್ಗೆ ಆಸಕ್ತಿ ಉಂಟಾಗಬಹುದು. ಒಂದೇ ರೀತಿಯ ಕೆಲಸವನ್ನು ಮಾಡಿ ಬೇಸರವಾದೀತು. ಹೊಸ ವಸ್ತುಗಳನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ.
ಕರ್ಕಾಟಕ ರಾಶಿ:
ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನೀವು ಗಟ್ಟಿಯಾಗಿದೇ ನಿಮ್ಮವರನ್ನು ಗಟ್ಟಿಮಾಡಲಾಗದು. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ಬಹಳ ದಿನಗಳ ಅನಂತರದ ಆಪ್ತರ ಒಡನಾಟ ಖುಷಿಯನ್ನು ಕೊಡಬಹುದು. ಸಿಟ್ಟಿನಿಂದ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವುದು ಬೇಡ.
ಸಿಂಹ ರಾಶಿ:
ನ್ಯಾಯಾಲಯದಿಂದ ಶುಭ ವಾರ್ತೆ ಬರಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ.
ಕನ್ಯಾ ರಾಶಿ:
ಅತಿಥಿ ಸತ್ಕಾರವೂ ಪೂಜಯಷ್ಟೇ ಯೋಗ್ಯತೆಯನ್ನು ಹೊಂದಿದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಿವರು ಉತ್ಸಾಹದ ಕಾರಣ ಉತ್ತಮ ಲಾಭವನ್ನು ಪಡೆಯಬಹುದು. ಹೊಸ ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ನಿಮ್ಮ ಎಲ್ಲ ನಿರ್ಧಾರಗಳೂ ನಿಮಗೇ ನಕಾರಾತ್ಮಕವಾಗಿ ಇರುವಂತೆ ತೋರುವುದು.
ತುಲಾ ರಾಶಿ:
ಹಿತಮಿತವಾದ ಮಾತುಗಾರಿಕೆಯಿಂದ ಎಲ್ಲರಿಗೂ ಹಿತವಾಗುವುದು. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಅಸಮಾಧಾನವೆನಿಸುವ ಸಂಗತಿ ಸಿಕ್ಕರೆ ಸ್ವಲ್ಪ ತಾಳ್ಮೆ ಇರಲಿ. ಸಂಗಾತಿಗೆ ನೀವು ಉತ್ತಮ ಕೆಲಸವು ಕೊಡಿಸುವಿರಿ. ಸರಳತೆಯೇ ನಿಮ್ಮ ಪ್ರಶಂಸೆಗೆ ಕಾರಣವಾಗುವುದು.
ವೃಶ್ಚಿಕ ರಾಶಿ:
ನೀವು ಮಾಡುವ ಧಾರ್ಮಿಕ ಕಾರ್ಯದಲ್ಲಿ ಸಂಪೂರ್ಣ ಶ್ರದ್ಧೆಯಿರಲಿ. ಅನೇಕ ರೀತಿಯ ಫಲಗಳನ್ನು ನೀವು ಪಡೆಯಲಿದ್ದು ಕೋಪ ನಿಯಂತ್ರಿಸಬೇಖಾಗುವುದು. ನಿಮ್ಮನ್ನು ಅನುಕರಣೆ ಮಾಡಬಹುದು. ಮಕ್ಕಳ ಪ್ರಗತಿಯಿಂದ ನಿಮಗೆ ಶ್ರೇಯಸ್ಸು. ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಮಾಡಿಕೊಳ್ಳಿ.
ಧನು ರಾಶಿ:
ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ನಿಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ನಿಮ್ಮ ಪ್ರಭಾವ ಹೆಚ್ಚಾಗಿ ಇರುವುದರಿಂದ ಶತ್ರುಗಳು ದೂರ ಹೋಗುತ್ತಾರೆ ಮತ್ತು ದೀರ್ಘ ಕಾಲದಿಂದ ಬಾಕಿ ಉಳಿದಂತಹ ಯೋಜನೆ ಪೂರ್ಣಗೊಳ್ಳುವುವು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವಿರಿ.
ಮಕರ ರಾಶಿ:
ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಉನ್ನತ ಪದವಿಯನ್ನು ಮಾಡುವವರಿಗೆ ಮುಂದಿನ ದಾರಿ ಸ್ಪಷ್ಟವಾಗುವುದು. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ನಿರೀಕ್ಷಿತ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.
ಕುಂಭ ರಾಶಿ:
ಹೂಡಿಕೆಯನ್ನು ಅನೇಕ ಜನರು ಸೇರಿ ಮಾಡುವವರಿದ್ದೀರಿ. ಕುಟುಂಬ ಜೀವನ ಸಾಮಾನ್ಯವಾಗಿರುತ್ತದೆ. ಹೊಸ ಉದ್ಯೋಗಕ್ಕೆ ಅವಕಾಶವು ಪ್ರಾಪ್ತವಾಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡುವಿರಿ. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು.
ಮೀನ ರಾಶಿ:
ಆಸ್ತಿ ವ್ಯವಹಾರದಲ್ಲಿ ಹಿನ್ನಡೆಯಾದಂತೆ ಅನ್ನಿಸಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು. ಭೂಮಿಯ ಉತ್ಪನ್ನಗಳಿಂದ ನಿಮಗೆ ಲಾಭ. ಅಪಘಾತ ಭೀತಿಯು ಕಾಡುವುದು.


