Thursday, October 23, 2025

ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬೇರೆ ಧರ್ಮದ ಚಿಹ್ನೆ ಬರೆದು ಓಡಿ ಹೋದ ಖದೀಮರು!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆಯಾದ ನಕ್ಷತ್ರ ಹಾಗೂ ಅರ್ಧ ಚಂದ್ರವನ್ನು ಬಿಡಿಸಿದ್ದಾರೆ. ಇದಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ಕೂಡ ನುಗ್ಗಿದ್ದರು. ಆದರೆ ಅಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿದು ಬಂದಿದೆ.

error: Content is protected !!