Wednesday, December 24, 2025

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ: ರಾಗಾ ವಿರುದ್ಧ ಎಚ್‌ಡಿಕೆ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಕ್ಸ್ ಮೂಲಕ ಕಿಡಿಕಾರಿದ್ದಾರೆ.

ಗುರುವಾರ ರಾಹುಲ್‌ಗಾಂಧಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಹಾಗೂ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ ಮಾಡುತ್ತಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ.

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ.

ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2025

error: Content is protected !!