Thursday, September 11, 2025

ಬಸ್‍ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ : ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿತ್ರದುರ್ಗ ನಗರದ ಬಸ್ ನಿಲ್ದಾಣ ಬಳಿ ಎರಡು ಬಸ್‍ಗಳ ನಡುವೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆಟೋಗೆ ಹಿಂಭಾಗದಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿ ಮುಂದೆ ತೆರಳುತ್ತಿದ್ದ ಸಾರಿಗೆ ಬಸ್‍ಗೆ ಅಪ್ಪಳಿಸಿದೆ. ಇದರಿಂದ ಎರಡು ಬಸ್‍ಗಳ ನಡುವೆ ಆಟೋ ಸಿಲುಕಿದೆ. ಪರಿಣಾಮ ಆಟೋ ಚಾಲಕ ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ