Monday, October 13, 2025

ಬಹುನಿರೀಕ್ಷಿತ 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆ ಆಗಲಿದೆ. ಇಂದು ಬೆಳ್ಳಗ್ಗೆ 10.30ರ ವೇಳೆಗೆ ಸಿಎಂ, ಡಿಸಿಎಂ ಸಾರ್ವಜನಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಬಿಡಿಎ ಕಳೆದ 2 ವರ್ಷಗಳಿಂದ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ ಕಾಮಗಾರಿ ನಡೆಸುತ್ತಾ ಇತ್ತು ಇದರ ಕಾಮಗಾರಿ ಪೂರ್ಣಗೊಂಡಿದೆ. ಇಂದು ಹೆಬ್ಬಾಳ ಪ್ಲೈ ಓವರ್ ಉದ್ಘಾಟನೆ ಮಾಡಲಾಗ್ತಿದೆ. 700 ಮೀಟರ್ ಉದ್ದದ ಈ ಫ್ಲೈ ಓವರ್‌ನಿಂದ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಕಡೆಗೆ ಸಾಗಲಿದೆ.

ಈ ಸಂಚಾರ ದಟ್ಟಣೆ ನಿವಾರಿಸಲು ಹೆಬ್ಬಾಳ ಫ್ಲೈಓವರ್ ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಮತ್ತು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹೀಗಾಗಿ, ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತದೆ. ಫ್ಲೈ ಓವರ್ ಸಂಚಾರಕ್ಕೆ ಮುಕ್ತಗೊಂಡ ನಂತರ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ.

error: Content is protected !!