ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತಕ್ಕೊಳಗಾಗಿದ್ದ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅವರ ಆರೋಗ್ಯ ಸುಧಾರಿಸಿದೆ.
ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾದ ನಟನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ನಟ ಶ್ರೇಯಸ್ ತಲ್ಪಾಡೆ ಸ್ಥಿತಿ ಸ್ಥಿರವಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಡಿಸೆಂಬರ್ 14 ರಂದು (ಗುರುವಾರ) ಮುಂಬೈನಲ್ಲಿ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ವೆಲ್ಕಮ್ ಟು ದಿ ಜಂಗಲ್ ಶೂಟಿಂಗ್ನಲ್ಲಿ ಭಾಗಿ ಆಗಿದ್ದರು. ಸಂಜೆ ವೇಳೆ ನಟನಿಗೆ ಅಸ್ವಸ್ಥತೆ ಉಂಟಾಗಿ, ಹೃದಯಾಘಾತವಾಯಿತು ಎಂದು ವರದಿಯಾಗಿದೆ. ಸದ್ಯ ನಟನ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಸದಸ್ಯರೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಗೋಲ್ಮಾಲ್ 3, ಗೋಲ್ಮಾಲ್ ರಿಟರ್ನ್ಸ್ ಸೇರಿದಂತೆ ಹಲವು ಕಾಮಿಡಿ ಸಿನಿಮಾಗಳಲ್ಲಿ ಶ್ರೇಯಸ್ ತಲ್ಪಾಡೆ ನಟಿಸಿದ್ದರು.