ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಇಂದು ಮ್ಯಾನ್ಮಾರ್ಗೆ ತೆರಳುತ್ತಿದ್ದ ಗುಂಪಿನ ಮೇಲೆ ಬಂಡುಕೋರರ ಪಡೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.
ಇದರಿಂದ ಕೆಲ ದಿನಗಳಿಂದ ಶಾಂತವಾಗಿದ್ದ ಗುಡ್ಡಗಾಡು ರಾಜ್ಯ ಮಣಿಪುರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದೆ.
ಭದ್ರತಾ ಪಡೆಯಿಂದ ಘಟನೆ ನಡೆದ ಗ್ರಾಮದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ದಾಳಿಯ ವೇಳೆ ಎರಡೂ ಗುಂಪುಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಸಾವಿಗೀಡಾದವರ ಗುರುತು ಪತ್ತೆಯಾಗಿಲ್ಲ. ಇವರ್ಯಾರೂ ಸ್ಥಳೀಯರಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ಪತ್ತೆ ಮಾಡಿವೆ ಎಂದು ಮಾಹಿತಿ ನೀಡಿದ್ದಾರೆ.