ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ: 20 ಪ್ರಾಥಮಿಕ, 11 ಪ್ರೌಢ ಶಾಲಾ ಶಿಕ್ಷಕರ ಮುಡಿಗೆ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಸರಕಾರದಿಂದ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರನ್ನು 2022-23ನೇ ಸಾಲಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

2022-23ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ತಲಾ 10 ಸಾವಿರ ನಗದು ಪುರಸ್ಕಾರವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದೆ.
2022-23ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಉಪನ್ಯಾಸಕ, ಪ್ರಾಂಶುಪಾಲರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 05-09-2022ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಕಾರ್ಯಕ್ರಮ ನಡೆಸಿ, ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!