Friday, September 12, 2025

ರಾಜ್ಯಾದ್ಯಂತ ಬಿಡದೆ ಸುರಿಯುತ್ತಿದೆ ಮಳೆ, ಈ ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ಇಂದು ಮೂರು ಜಿಲ್ಲೆಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ