January20, 2026
Tuesday, January 20, 2026
spot_img

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಮೆರಿಕದೊಂದಿಗಿನ ಸುಂಕ ಯುದ್ಧದ ನಡುವೆ, ಪ್ರಧಾನಿ ನರೇಂದ್ರ ಮೋದಿ ರೈತರ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಪ್ರಧಾನಿ ಮೋದಿ ಟ್ರಂಪ್​​ಗೆ ಸವಾಲೆಸೆದಿದ್ದಾರೆ. ರೈತರ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆ,  ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

ನವದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿಯ ಮೇಲಿನ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ನಮಗೆ ರೈತರ ಹಿತಾಸಕ್ತಿಯೇ ಪ್ರಮುಖ ಆದ್ಯತೆಯಾಗಿದೆ, ಭಾರತವು ತನ್ನ ರೈತರು, ಜಾನುವಾರು ರೈತರು ಮತ್ತು ಮೀನುಗಾರ ಸಹೋದರ ಸಹೋದರಿಯರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಇದಕ್ಕಾಗಿ ನಾನು ವೈಯಕ್ತಿಕವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ ಆದರೆ ನಾನು ಅದಕ್ಕೆ ಸಿದ್ಧನಿದ್ದೇನೆ’’ ಎಂದು ಮೋದಿ ಹೇಳಿದ್ದಾರೆ.

Must Read