ಲಾಲೂ ಆರೋಗ್ಯದಲ್ಲಿ ತೀವ್ರ ಏರುಪೇರು: ದೆಹಲಿಯ ಏಮ್ಸ್ ಗೆ ಶಿಫ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಜನತಾ ದಳ ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ಮೇವು ಹಗರಣ ಪ್ರಕರಣಗಳಿಗೆ ಸಂಬಂಧಿಸಿ ಈಗಾಗಲೇ ಶಿಕ್ಷೆಗೆ ಗುರಿಯಾಗಿರುವ ಲಾಲೂಗೆ ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಕಾಣಿಸಕೊಂಡಿತ್ತು. ಜೊತೆಗೆ ಶುಕ್ರವಾರ ನ್ಯುಮೋನಿಯಾ ಕೂಡಾ ಕಾಣಿಸಿಕೊಂಡ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ದೆಹಲಿಯ ಏಮ್ಸ್‌ಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ (ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ನಿರ್ದೇಶಕ ಡಾ. ಕಾಮೇಶ್ವರ್ ಪ್ರಸಾದ್ ತಿಳಿಸಿದ್ದಾರೆ.
ಇಂದು ಅವರನ್ನು ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಈ ಬಗ್ಗೆ ನಾವು ಎಐಐಎಂಎಸ್ ತಜ್ಞರೊಂದಿಗೆ ಮಾತನಾಡಿದ್ದೇವೆ. ಯಾದವ್ ಅವರನ್ನು ಏಮ್ಸ್-ದೆಹಲಿಗೆ ಸ್ಥಳಾಂತರಿಸಲು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುತ್ತಿದೆ ಎಂದು ಅವರು ಹೇಳಿದರು.
ಲಾಲೂ ಅವರ ಪತ್ನಿ ರಾಬ್ರಿ ದೇವಿ, ಮಗಳು ಮಿಸಾ ಭಾರತಿ, ಮಕ್ಕಳಾದ ತೇಜ್ ಪ್ರತಾಪ್ ಮತ್ತು ತೇಜಸ್ವಿ ಕಳೆದ ರಾತ್ರಿಯೇ ರಾಂಚಿ ತಲುಪಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!