ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿಗಳ ಮೊಬೈಲ್ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.
ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ.
ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ
ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್ನನ್ನೂ ಪೊಲೀಸರು ಬಂಧಿಸಿದ್ದಾರೆ.